
ಕೋಲಾರ, ೦೨ ಡಿಸೆಂಬರ್ (ಹಿ.ಸ) :
ಆ್ಯಂಕರ್ : ಡಿಸೆಂಬರ್ ೭ ರಂದು ನೆಡೆಯುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತೆ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೂ ಅವಕಾಶ ಇರಬಾರದು. ಆದ್ದರಿಂದ ಅಧಿಕಾರಿಗಳು ಅಡಚಣೆ ಇಲ್ಲದೆ ಪಾರದರ್ಶಕತೆಯಿಂದ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತೆ ಪರೀಕ್ಷೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದರು.
ಪರೀಕ್ಷೆಯು ಜಿಲ್ಲೆಯ ೨೨ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಅಧಿವೇಶನಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಸಂಬ0ಧ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಗ್ರೂಪ್-ಬಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ನೇಮಿಸಿದೆ. ಅಧಿಕಾರಿಗಳು ಸಂಬAಧಿಸಿದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ. ಪರೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು .
ಇಪ್ಪತ್ತೆರಡು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಪರೀಕ್ಷಾ ದಿನಗಳಂದು ನಿಷೇಧಾಜ್ಞೆ-೧೪೪ ಸೆಕ್ಷನ್ ಜಾರಿಗೊಳಿಸಲಾಗುವುದು. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಗ್ಗೆ ೯:೩೦ ರಿಂದ ಅಪರಾಹ್ನ ೧೨:೦೦ ಹಾಗೂ ಮಾಧ್ಯಾಹ್ನ ೨:೦೦ ರಿಂದ ೪:೩೦ ಘಂಟೆಯವರೆಗೆ ಮುಚ್ಚಿಸಬೇಕು. ಅಲ್ಲದೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೋಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಗೌಪ್ಯ ಸಾಮಗ್ರಿಗಳನ್ನು ಖಜಾನೆಯಲ್ಲಿ ಸಂರಕ್ಷಿಸಲು ಮೂರು ಸದಸ್ಯರ ಸಮಿತಿ ರಚಿಸುವ ಸೂಚಿಸಿದರು. ಖಜಾನೆಯಿಂದ ಪಡೆದು ಸಾಮಗ್ರಿಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಮತ್ತು ಸಂರಕ್ಷಿಸಲು ಸೂಕ್ತ ನಿರ್ದೇಶನ ನೀಡಿ ಪ್ರಶ್ನೆಪತ್ರಿಕೆಗಳ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರಗಳಿಗೆ ಹಾಗೂ ಉತ್ತರಪತ್ರಿಕೆಗಳ ಬಂಡಲ್‌ಗಳನ್ನು ಜಿಲ್ಲಾ ಖಜಾನೆಗೆ ಸಾಗಿಸುವ ಮಾರ್ಗಾಧಿಕಾರಿಗಳ ವಾಹನಗಳಿಗೆ ಭದ್ರತೆ ಒದಗಿಸುವ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರಿಗೆ ಸೂಚನೆ ನೀಡಿದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆಂಬುಲೆನ್ಸ್, ಅಶಾ ಕಾರ್ಯಕರ್ತೆಯರು, ಬೆಸ್ಕಾಂ ಅಧಿಕಾರಿಗಳನ್ನು ಸಹ ನಿಯೋಜಿಸಲು ತಿಳಿಸಿದರು. ಪರೀಕ್ಷಾ ಸಂದರ್ಭದಲ್ಲಿ ಸೂಕ್ತ ವಿದ್ಯುತ್ ವ್ಯವಸ್ಥೆ ನೋಡಿಕೊಳ್ಳಬೇಕು. ಕೋಲಾರ ಜಿಲ್ಲೆಯಲ್ಲಿ ಒಟ್ಟು ಎರಡು ಪರೀಕ್ಷಾ ಅಧಿವೇಶನಗಳಿದ್ದು ೧ನೇ ಅಧಿವೇಶನದಲ್ಲಿ ೯ ಕೇಂದ್ರಗಳಲ್ಲಿ ೨೦೧೬ ಅಭ್ಯರ್ಥಿಗಳು ಮತ್ತು ೨ನೇ ಅಧಿವೇಶನದಲ್ಲಿ ೨೨ ಕೇಂದ್ರದಲ್ಲಿ ೫೨೯೩ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದರೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ನೀಡಲು ಒಟ್ಟು ೭ ಮಾರ್ಗಗಳು ೭ ಮಾರ್ಗಾಧಿಕಾರಿಗಳು ವೀಕ್ಷಕರನ್ನು ಹಾಗೂ ೨೨ ಮುಖ್ಯ ಅಧೀಕ್ಷಕರು ೨೨ ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಮಂಗಳ,ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಅಲ್ಮಾಸ್ ಪರ್ವೀನ್ ತಾಜ್ ಭಾಗವಹಿಸಿದ್ದರು.
ಚಿತ್ರ : ಡಿಸೆಂಬರ್ ೭ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಿದ್ದತೆಗಳ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್