
ರಾಯಚೂರು, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ ಅವರು ಡಿಸೆಂಬರ್ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್‍ಸ್ಟ್ರಿಪ್ ನಿಂದ ಹೆಲಿಕ್ಯಾಪ್ಟರ್ ಮುಖಾಂತರ ಹೊರಟು, ಬೆಳಿಗ್ಗೆ 11 ಗಂಟೆಗೆ ರಾಯಚೂರಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 11 ರಿಂದ, ಯರಮರಸ್, ಮಾವಿನಕೆರೆ ಸೇರಿದಂತೆ ವಿವಿಧೆಡೆ ಭೇಟಿ ಕಾರ್ಯಕ್ರಮದ ಬಳಿಕ, ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ದೇವರಾಜ ಬಿ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್