ಡಿ.7 ರಂದು ಜಿಲ್ಲೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ
ಕೊಪ್ಪಳ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಡಿಸೆಂಬರ್ 7 ರಂದು ಕೊಪ್ಪಳ ನಗರದ 29 ಹಾಗೂ ಗಂಗಾವತಿಯ 8 ಕೇಂದ್ರಗಳು ಸೇರಿದಂತೆ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿವೆ. ಅಂದು ಬೆಳಗ್ಗೆ 9.30 ಗಂಟೆಯಿಂದ ಮಧ್ಯಾ
ಡಿ.7 ರಂದು ಜಿಲ್ಲೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ


ಕೊಪ್ಪಳ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಡಿಸೆಂಬರ್ 7 ರಂದು ಕೊಪ್ಪಳ ನಗರದ 29 ಹಾಗೂ ಗಂಗಾವತಿಯ 8 ಕೇಂದ್ರಗಳು ಸೇರಿದಂತೆ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿವೆ.

ಅಂದು ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪತ್ರಿಕೆ-2 ರ ಪರೀಕ್ಷೆಗಳು ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande