ಉಪಹಾರ ಸಭೆ ಕೇವಲ ಟೀಸರ್ : ಬೊಮ್ಮಾಯಿ‌ ವ್ಯಂಗ್ಯ
ನವದೆಹಲಿ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆ
ಉಪಹಾರ ಸಭೆ ಕೇವಲ ಟೀಸರ್ : ಬೊಮ್ಮಾಯಿ‌ ವ್ಯಂಗ್ಯ


ನವದೆಹಲಿ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ರಾಜಕೀಯ ಏಳು ಬೀಳುಗಳು ಪಕ್ಷಗಳ ನಡುವೆ ನಡೆಯುತ್ತವೆ. ಆದರೆ, ಇಬ್ಬರು ಹಿರಿಯ ನಾಯಕರು ‌ರಾಜ್ಯದ ಜನರನ್ನು ಮೂರ್ಖರು ಎಂದು ತಿಳಿದುಕೊಂಡಿದ್ದಾರಾ ಅವರು ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎನ್ನುವ ಬಗ್ಗೆ ಇಷ್ಟೆಲ್ಲಾ ಸರ್ಕಸ್ ನಡೆದರೂ ಕರ್ನಾಟಕವನ್ನು ತಮ್ಮ ರಾಜಕೀಯ ಕುರ್ಚಿಗಾಗಿ ಬಳಸಿಕೊಂಡು ಈಗ ಇಬ್ಬರೂ ಸೇರಿ ಬ್ರೇಕ್ ಫಾಸ್ಟ್ ಮಾಡಿ ಏನು ನಡೆದಿಲ್ಲ ಎಂದರೆ ಜನರನ್ನು ಬಹಳ ತಪ್ಪಾಗಿ ತಿಳಿದುಕೊಂಡಿದ್ದಾರೆ. ಬಹಳ ಬಾಲಿಶವಾಗಿ ನಡೆದುಕೊಳ್ಳುತ್ತಿದ್ದಾರೆ. ಎರಡನೆಯದಾಗಿ ಹೈಕಮಾಂಡ್ ಹೇಳಿದ ಮೇಲೆ ಇಬ್ಬರೂ ಸೇರಿ ಬ್ರೇಕ್ ಫಾಸ್ಟ್ ಮಾಡುತ್ತಿದ್ದೇವೆ ಎಂದು ಹೇಳಿದರೆ ಇಬ್ಬರ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲ ಅಂತ ಅರ್ಥ. ಪರಸ್ಪರ ಒಪ್ಪಂದ ಆಗಿಲ್ಲ ಅಂತ ಅರ್ಥ ಆಯಿತು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande