
ಚಿತ್ರದುರ್ಗ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಸದ್ಯ ರೂ.200 ಕೋಟಿ ಹಣವಿದೆ. ಸರ್ಕಾರ ಕಾಲ ಕಾಲಕ್ಕೆ ಆಯವ್ಯಯದಲ್ಲಿ ಅನುದಾನ ಮಂಜೂರು ಮಾಡುತ್ತಿದ್ದು, ಅನುದಾನದ ಕೊರತೆ ಇಲ್ಲ. ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾದರೆ ಮಾತ್ರ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಅನುದಾನ ಕೇಳಲು ಅನುವಾಗುತ್ತದೆ. ನಿಗಮದಲ್ಲಿ ಅನುದಾನ ಕೊರತೆ ಇದೆ ಎನ್ನುವುದು ಊಹಾಪೋಹದ ಮಾತುಗಳಾಗಿವೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಮಗದ ಅಧ್ಯಕ್ಷ ಎಂ.ರಾಮಪ್ಪ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮಶೀಲತೆ, ಸ್ವಾವಲಂಭಿ ಸಾರಥಿ, ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಕಿರುಸಾಲ, ಗಂಗಾ ಕಲ್ಯಾಣ, ಭೂ ರಹಿತಿ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿನ ಭೋವಿ, ಒಡ್, ಒಡ್ಡ, ಒಡ್ಡರ್, ವಡ್ಡರ್, ವಡ್ಡರ, ಕಲ್ಲು ಒಡ್ಡರ, ಬೆಸ್ತರಲ್ಲದ ಭೋವಿ, ಮಣ್ಣು ವಡ್ಡರ ಜಾತಿಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡಲಾಗುತ್ತಿದೆ ಎಂದು ಎಂ.ರಾಮಪ್ಪ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa