
ಕೊಪ್ಪಳ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿಸೆಂಬರ್ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ 18 ರಿಂದ 32 ವರ್ಷದೊಳಗಿನ ಎಸ್.ಎಸ್.ಎಲ್.ಸಿ(ಪಾಸ್/ಫೇಲ್), ಪಿ.ಯು.ಸಿ (ಪಾಸ್/ಫೇಲ್), ಐ.ಟಿ.ಐ, ಇತರೆ ಪದವಿ ಮುಗಿಸಿದ ನಿರುದ್ಯೋಗಿ ಪುರುಷ ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‍ಪೋರ್ಟ್ ಅಳತೆಯ 2 ಭಾವ ಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್