ಕಂಪ್ಯೂಟರ್ ಸಾಕ್ಷರತೆ ಇಂದಿನ ಅಗತ್ಯ : ಪಿ.ಡಿ.ಓ ನಾಗರಾಜ್
ಕಂಪ್ಯೂಟರ್ ಸಾಕ್ಷರತೆ ಇಂದಿನ ಅಗತ್ಯ : ಪಿ.ಡಿ.ಓ ನಾಗರಾಜ್
ಕೋಲಾರ ತಾಲ್ಲೂಕಿನ ಹರಟಿ ಗ್ರಾಮ ಪಂಚಾಯಿತಿ ಸಾರ್ವಜನಿಕ ಗ್ರಂಥಾಲಯದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಉದ್ಘಾಟಿಸಿದರು.


ಕೋಲಾರ, ೦೨ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರು ಕಂಪ್ಯೂಟರ್ ಶಿಕ್ಷಣ ಪಡೆಯಬೇಕು, ಕಂಪ್ಯೂಟರ್ ತಂತ್ರಜ್ಞಾನದ ಬಗ್ಗೆ ಡಿಜಿಟಲ್ ಸಾಕ್ಷರತೆಯ ಮಾನವನ್ನು ಪಡೆಯುವ ಮೂಲಕ ದೇಶದ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯುವ0ತೆ ಹರಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ನಾಗರಾಜ್ ತಿಳಿಸಿದರು.

ಹರಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಇಂದು ಏರ್ಪಡಿಸಿದ್ದ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನ ಉದ್ಘಾಟಿಸಿದರು.

ಶಿಕ್ಷಣ ಅಥವಾ ಕಂಪ್ಯೂಟರ್ ಶಿಕ್ಷಣ ಯಾರೋ ಒಬ್ಬರ ಸ್ವತ್ತು ಅಲ್ಲ. ಇದನ್ನು ಪಡೆಯುವ ಮೂಲಕ ಪ್ರತಿಯೊಬ್ಬರೂ ಜ್ಞಾನವಂತರಾಗಬೇಕು ವಿದ್ಯಾವಂತರಾಗಬೇಕು ಸಾಕ್ಷರರಾಗಬೇಕು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ಪಂದಿಸಬೇಕು ಸಾಕ್ಷರ ನಾಡನ್ನು ತಯಾರಿಸಲು ನೆರವಾಗಬೇಕು ಎಂದರು.

ವಿದ್ಯಾರ್ಥಿಗಳ ಹಾದಿಯಾಗಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ವಯೋಮಾನಕ್ಕೆ ಅನುಗುಣವಾಗಿ ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಆದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಓದುಗರಿಗೆ ಪುಸ್ತಕಗಳನ್ನು ವಿತರಿಸಿದ ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ. ಶ್ರೀನಿವಾಸ್, ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕ ಹೆಚ್.ಜಿ. ವೆಂಕಟರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಹರಟಿ ಗ್ರಾಮ ಪಂಚಾಯಿತಿ ಸಾರ್ವಜನಿಕ ಗ್ರಂಥಾಲಯದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande