
ಬೀದರ್, 20 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಗನ್ಮಾತೆ ಅಕ್ಕಮಹಾದೇವಿ ಕನ್ನಡ ಚಲನಚಿತ್ರವು ಜನವರಿ 2ರಂದು ಬೀದರ ಸಪ್ನಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ನಾಯಕ ನಟ ಬಿ.ಜೆ. ವಿಷ್ಣುಕಾಂತ ತಿಳಿಸಿದ್ದಾರೆ.
ಈ ಹಿಂದೆ ಡಿಸೆಂಬರ್ 19ರಂದು ಚಿತ್ರವನ್ನು ಬಿಡುಗಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಇದೀಗ ಜನವರಿ 2ರಂದು ಕಲ್ಯಾಣ ಕರ್ನಾಟಕದ ಬೀದರ ನಗರದಿಂದಲೇ ಚಿತ್ರವನ್ನು ಬಿಡುಗಡೆಗೊಳಿಸುವುದಾಗಿ ಹೇಳಿದ್ದಾರೆ.
ಅಕ್ಕಮಹಾದೇವಿಯ ಜೀವನ, ತತ್ವ ಹಾಗೂ ಆತ್ಮಸಾಧನೆಯ ಪಥವನ್ನು ಆಧಾರವಾಗಿಸಿಕೊಂಡಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ ಎಂದು ಚಿತ್ರತಂಡವು ವಿಶ್ವಾಸ ವ್ಯಕ್ತಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa