ಸಿಪೆಟ್ ಉದ್ಯೋಗಾಧಾರಿತ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರಕ್ಕೆ 2026-27ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್
ಸಿಪೆಟ್ ಉದ್ಯೋಗಾಧಾರಿತ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 20 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರಕ್ಕೆ 2026-27ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೆಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ – 3 ವರ್ಷಗಳ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಹುದು.

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು ಹಾಗೂ ಆನ್‍ಲೈನ್ ವೆಬ್ ಸೈಟ್ https://cipet26.onlineregistrationform.org/CIPET/ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.0821-2510618, ಮೊ.9480253024, 9791431827 ಗೆ ಸಂಪರ್ಕಿಸಬಹುದು. ಸಿಪೆಟ್ ಡಿಪೆÇ್ಲೀಮಾ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶ ನೀಡಲಾಗುತ್ತದೆ ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande