
ಕನಕಗಿರಿ, 20 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕನಕಗಿರಿ ಪಟ್ಟಣದ ಪಂಚಾಯತಿ ವತಿಯಿಂದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು 10 ಎಕರೆ ಜಮೀನಿನ ಅವಶ್ಯಕತೆ ಇದೆ ಎಂದು ಕನಕಗಿರಿ ಪ.ಪಂ. ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಕನಕಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸಲು ಸುಮಾರು 10 ಎಕ್ಕರೆ ಜಮೀನಿನ ಅವಶ್ಯಕತೆ ಇದ್ದು, ನೀಡಲು ಇಚ್ಛಿಸುವವರು ಜಮೀನಿನ ಸೂಕ್ತ ದಾಖಲೆ ಹಾಗೂ ವಿವರಗಳೊಂದಿಗೆ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ಅವಧಿಯಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅಥವಾ ವಸತಿ ವಿಭಾಗದ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್