ಎಸ್‌ಎಸ್‌ಬಿ ಸ್ಥಾಪನಾ ದಿನ : ಸಿಬ್ಬಂದಿ ಹಾಗೂ ಕುಟುಂಬಗಳಿಗೆ ಅಮಿತ್ ಶಾ ಶುಭಾಶಯ
ನವದೆಹಲಿ, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಶಸ್ತ್ರ ಸೀಮಾ ಬಲ್ ಸ್ಥಾಪನಾ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ನಮ್ಮ ಗಡಿಗ
SSB Foundation Day


ನವದೆಹಲಿ, 20 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಶಸ್ತ್ರ ಸೀಮಾ ಬಲ್ ಸ್ಥಾಪನಾ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಂದರ್ಭಗಳಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವವರೆಗೆ ಎಸ್‌ಎಸ್‌ಬಿ ಯಾವಾಗಲೂ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಅವರು ಪ್ರಶಂಸಿಸಿದ್ದಾರೆ.

ಕರ್ತವ್ಯ ನಿರ್ವಹಣೆಯ ವೇಳೆ ಅಂತಿಮ ತ್ಯಾಗ ಮಾಡಿದ ಹುತಾತ್ಮರಿಗೆ ನಮನ ಸಲ್ಲಿಸಿರುವ ಅಮಿತ್ ಶಾ, ಎಸ್‌ಎಸ್‌ಬಿಯ ಸೇವಾ ನಿಷ್ಠೆ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande