ಅಕ್ರಮ ವಲಸಿಗರನ್ನು ಪೋಷಿಸುತ್ತಿರುವ ಕಾಂಗ್ರೆಸ್ : ಅಶೋಕ
ಬೆಂಗಳೂರು, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದೆಲ್ಲೆಡೆ ಅಕ್ರಮ ವಲಸಿಗರ ಪಿಡುಗು ಮಿತಿ ಮೀರಿದೆ. ರಾಜ್ಯದಲ್ಲಿರುವ ಸುಮಾರು 20 ಲಕ್ಷ ಅಕ್ರಮ ವಲಸಿಗರನ್ನು ಹೊರಹಾಕುವ ಬದಲು ಅವರನ್ನು ಮತಬ್ಯಾಂಕ್‌ಗಾಗಿ ಪೋಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಪ್ರತಿಪಕ್ಷ
Ashok


ಬೆಂಗಳೂರು, 20 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದೆಲ್ಲೆಡೆ ಅಕ್ರಮ ವಲಸಿಗರ ಪಿಡುಗು ಮಿತಿ ಮೀರಿದೆ. ರಾಜ್ಯದಲ್ಲಿರುವ ಸುಮಾರು 20 ಲಕ್ಷ ಅಕ್ರಮ ವಲಸಿಗರನ್ನು ಹೊರಹಾಕುವ ಬದಲು ಅವರನ್ನು ಮತಬ್ಯಾಂಕ್‌ಗಾಗಿ ಪೋಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡುತ್ತಿದ್ದಾರೆ. ಚುನಾವಣಾ ಆಯೋಗವು SIR ಮೂಲಕ ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಹಾಕಲು ಮುಂದಾದರೆ, ಕಾಂಗ್ರೆಸ್ ಪಕ್ಷವು ಅವರ ಪರವಾಗಿ ಮೃದು ಧೋರಣೆ ತಾಳಿ ಮತಗಳ್ಳತನ ಎಂಬ ಕುಂಟು ನೆಪವೊಡ್ಡಿ ಬೀದಿಗಿಳಿದು ನಾಟಕ ಮಾಡುತ್ತಿದೆ ಎಂದಿದ್ದಾರೆ.

ಕೊಲೆ, ಹಲ್ಲೆ, ಸುಲಿಗೆ, ದರೋಡೆ, ಅತ್ಯಾಚಾರ ಮತ್ತು ಗಲಭೆ ಪ್ರಕರಣದಲ್ಲಿ ಈ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿದೆ. ಕಾಂಗ್ರೆಸ್‌ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣದ ಕಾರಣಕ್ಕೆ ಅವರಿಗೆ ಬೇಕಾದಂತಹ ದಾಖಲಾತಿಗಳು ಅಕ್ರಮವಾಗಿ ಸಿಗುತ್ತಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅಕ್ರಮ ವಲಸಿಗರ ಮೇಲೆ ಕಠಿಣ ಕ್ರಮಕೈಗೊಂಡು, ಹೊರದಬ್ಬುವ ಕೆಲಸ ಮಾಡಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande