ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಗಮನಕ್ಕೆ
ಗದಗ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಟಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ 9 ಮತ್ತು 10 ನೇ ತರಗತಿಯ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಕೋರಿ ಅರ್ಜಿ ಸಲ್ಲಿಸಿರುವ ವಿದ್ಯಾರ
ಫೋಟೋ


ಗದಗ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಟಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ 9 ಮತ್ತು 10 ನೇ ತರಗತಿಯ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಕೋರಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಧಾರ ಆಧಾರಿತ ಬಯೋಮೆಟ್ರಿಕ್ ಇ ಆಂಥಟಿಕೇಷನ್ ಪ್ರಕ್ರಿಯೆ ಒಳಪಡಿಸಬೇಕಾಗಿರುತ್ತದೆ.

ಮೆಟ್ರಿಕ್ ಪೂರ್ವ 9 ಮತ್ತು 10 ನೇ ತರಗತಿ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಾಲೇಜಿನ ವಿದ್ಯಾರ್ಥಿಗಳು ಎಸ್‌ಎಸ್‌ಪಿ ಐಡಿ , ಆಧಾರ ಕಾರ್ಡ , 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳು ಸ್ಯಾಟ್ಸ್ ನಂಬರ್ ಆಧಾರ ಕಾರ್ಡ ನೊಂದಿಗೆ ತಮಗೆ ಹತ್ತಿರದ ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರ ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಎಸ್.ಪಿ, ಆಫೀಸ್ ಎದುರಿಗೆ ಗದಗ ಇಲ್ಲಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ ಆಂಥಟಿಕೇಷನ್ ಮಾಡಿಸಬೇಕಾಗಿರುತ್ತದೆ.

ಡಿಸೆಂಬರ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಎಸ್.ಪಿ. ಆಫೀಸ್ ಎದುರಿಗೆ , ಹೊಸ ಬಸ್ ನಿಲ್ದಾಣ ಹಿಂದುಗಡೆ ಗದಗ ದೂರವಾಣಿ ಸಂಖ್ಯೆ 08372-297258 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande