
ಬೆಂಗಳೂರು, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿರುವ ಪೋಷಕರು ಇಂದಿನಿಂದ ಡಿಸೆಂಬರ್ 24ರೊಳಗಾಗಿ ಸಮೀಪದ ಲಸಿಕಾ ಕೇಂದ್ರಗಳಿಗೆ ತೆರಳಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪೋಲಿಯೋ ಮುಕ್ತ ಭಾರತ ಅಭಿಯಾನದ ಅಂಗವಾಗಿ ಈ ಮನವಿಯನ್ನು ಮಾಡಿರುವ ಅವರು, “ಇಂದು ಮಗುವಿಗೆ ಹಾಕಿಸುವ ಎರಡು ಹನಿ ಲಸಿಕೆ ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸುತ್ತದೆ. ಪ್ರತಿಯೊಬ್ಬ ಪೋಷಕರೂ ಜವಾಬ್ದಾರಿಯಿಂದ ಲಸಿಕಾಕರಣಕ್ಕೆ ಸಹಕರಿಸಬೇಕು” ಎಂದು ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa