ರಾಷ್ಟ್ರೀಯ ಲಸಿಕಾ ದಿನಕ್ಕೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಲಸಿಕೆ ಹಾಕುವ ಮೂಲಕ “ರಾಷ್ಟ್ರೀಯ ಲಸಿಕಾ ದಿನ” ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದ
Cm


ಬೆಂಗಳೂರು, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಲಸಿಕೆ ಹಾಕುವ ಮೂಲಕ “ರಾಷ್ಟ್ರೀಯ ಲಸಿಕಾ ದಿನ” ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಯೊ ಮುಕ್ತ ಭಾರತ ನಿರ್ಮಾಣದಲ್ಲಿ ಲಸಿಕಾ ಅಭಿಯಾನಗಳ ಪಾತ್ರ ಅತ್ಯಂತ ಮಹತ್ವದ್ದೆಂದು ಹೇಳಿ, ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande