ಪರೀಕ್ಷಾ ಪೆ ಚರ್ಚಾ ; ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಗುವಾಹಟಿ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿ ವಿಹಾರ ನೌಕೆಯಲ್ಲಿ ಅಸ್ಸಾಂನ 25 ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ನಡೆಸಿದರು. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳೊಂ
Pm


ಗುವಾಹಟಿ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿ ವಿಹಾರ ನೌಕೆಯಲ್ಲಿ ಅಸ್ಸಾಂನ 25 ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ನಡೆಸಿದರು. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳೊಂದಿಗೆ ನಡೆಸುವ ಈ ವಾರ್ಷಿಕ ಸಂವಾದವು ಈ ಬಾರಿ ಸಾಂಪ್ರದಾಯಿಕ ಸ್ಥಳಗಳಿಂದ ಭಿನ್ನವಾಗಿ ವಿಶಿಷ್ಟ ನದೀ ವಿಹಾರ ವೇದಿಕೆಯಲ್ಲಿ ನಡೆದಿದ್ದು ಗಮನಸೆಳೆದಿತು.

ವಿದ್ಯಾರ್ಥಿಗಳೊಂದಿಗೆ ಮಾತುಕತೆ ಪೂರ್ಣಗೊಳಿಸಿದ ಬಳಿಕ, ಪ್ರಧಾನಿ ಮೋದಿ ಅವರು ಗುವಾಹಟಿಯ ಪಶ್ಚಿಮ ಬೋರಗಾಂವ್‌ನಲ್ಲಿರುವ ಹುತಾತ್ಮರ ಸ್ಮಾರಕ ಪ್ರದೇಶಕ್ಕೆ ಭೇಟಿ ನೀಡಿ ಅಸ್ಸಾಂ ಚಳವಳಿಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.

ನಂತರ ಅವರು ದಿಬ್ರುಗಢ ಜಿಲ್ಲೆಯ ನಮ್ರಪ್‌ಗೆ ತೆರಳಲಿದ್ದು, ಅಲ್ಲಿ 1.27 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯದ ರಸಗೊಬ್ಬರ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯು ಈಶಾನ್ಯ ಪ್ರದೇಶದಲ್ಲಿ ರಸಗೊಬ್ಬರ ಉತ್ಪಾದನೆಯನ್ನು ಬಲಪಡಿಸುವುದರ ಜೊತೆಗೆ ಕೃಷಿ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande