ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಗದಗ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶದಾದ್ಯಂತ ಏಕಕಾಲದಲ್ಲಿ ಜಾರಿಗೊಂಡ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಗದಗ ಜಿಲ್ಲೆಯಲ್ಲಿ ಭರ್ಜರಿ ಚಾಲನೆ ದೊರೆಯಿತು. ನಗರದ ಪ್ರಮುಖ ವೃತ್ತವಾದ ಮುಳಗುಂದ ನಾಕಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ
ಫೋಟೋ


ಗದಗ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೇಶದಾದ್ಯಂತ ಏಕಕಾಲದಲ್ಲಿ ಜಾರಿಗೊಂಡ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಗದಗ ಜಿಲ್ಲೆಯಲ್ಲಿ ಭರ್ಜರಿ ಚಾಲನೆ ದೊರೆಯಿತು. ನಗರದ ಪ್ರಮುಖ ವೃತ್ತವಾದ ಮುಳಗುಂದ ನಾಕಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ, ಮಕ್ಕಳಿಗೆ ಎರಡು ಹನಿ ಪೋಲಿಯೋ ಔಷಧ ಹಾಕುವ ಮೂಲಕ ಅಭಿಯಾನವನ್ನು ಅಧಿಕೃತವಾಗಿ ಉದ್ಘಾಟಿಸಿದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತರ ನಿರಂತರ ಶ್ರಮದಿಂದ ಇಂದು ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಈ ಸಾಧನೆಯನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು.

ಗದಗ ಜಿಲ್ಲೆಯಲ್ಲಿ ಯಾವುದೇ ಮಗು ಪೋಲಿಯೋ ಹನಿ ತಪ್ಪಿಸಿಕೊಳ್ಳದಂತೆ ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೂತ್‌ಗಳು, ಸಂಚಾರಿ ತಂಡಗಳು ಹಾಗೂ ಮನೆ ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಜನಸಂದಣಿ ಇರುವ ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿಶೇಷ ಪೋಲಿಯೋ ಬೂತ್‌ಗಳನ್ನು ತೆರೆಯಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಪೋಷಕರು ಉತ್ಸಾಹದಿಂದ ತಮ್ಮ ಪುಟ್ಟ ಮಕ್ಕಳನ್ನು ಕರೆತಂದು ಪೋಲಿಯೋ ಹನಿ ಹಾಕಿಸುತ್ತಿರುವ ದೃಶ್ಯಗಳು ಕಂಡುಬಂದವು.

ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಕ್ಕಳ ಆರೋಗ್ಯ ರಕ್ಷಣೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯ ಜನತೆ ಉತ್ತಮ ಸ್ಪಂದನೆ ನೀಡುತ್ತಿರುವುದು ಪ್ರಶಂಸನೀಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande