ಪೋಲಿಯೋ ನಿರ್ಮೂಲನಾ ಅಭಿಯಾನಕ್ಕೆ ಸಚಿವ ಗುಂಡೂರಾವ್ ಚಾಲನೆ
ಬೆಂಗಳೂರು, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಶೇಷಾದ್ರಿಪುರಂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪೋಲಿಯೋ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ
polio


ಬೆಂಗಳೂರು, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಶೇಷಾದ್ರಿಪುರಂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪೋಲಿಯೋ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದೇಶವನ್ನು ಪೋಲಿಯೋ ಮುಕ್ತವಾಗಿರಿಸಲು ಲಸಿಕೆ ಅಭಿಯಾನ ಅತ್ಯಂತ ಮಹತ್ವದ್ದಾಗಿದ್ದು, ಪೋಷಕರು ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು. ಸರ್ಕಾರವು ಮಕ್ಕಳ ಆರೋಗ್ಯ ರಕ್ಷಣೆಗೆ ಸಂಪೂರ್ಣ ಬದ್ಧವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಲಸಿಕೆ ತಲುಪಿಸುವ ಗುರಿಯೊಂದಿಗೆ ಆರೋಗ್ಯ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪೋಲಿಯೋ ಲಸಿಕೆ ಅಭಿಯಾನವು ನಗರ ಹಾಗೂ ಗ್ರಾಮೀಣ ಪ್ರದೇಶಗಳಾದ್ಯಂತ ವ್ಯಾಪಕವಾಗಿ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande