


ಬಳ್ಳಾರಿ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲೆಯಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮಗಳ ನಿಯಂತ್ರಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಬಿಜೆಪಿಯು ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.
ಪ್ರತಿಭಟನೆಯ ನೇತೃತ್ವವಹಿಸಿದ್ದ ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು ಅವರು, ಬಳ್ಳಾರಿ ನಗರ ಸೇರಿ ಜಿಲ್ಲೆಯಾದ್ಯಂತ
ವ್ಯಾಪಕವಾಗಿ ಅಕ್ರಮ ಅಕ್ಕಿ ಮಾರಾಟ ದಂಧೆ, ಇಸ್ಪೇಟ್, ಓಸಿ ಸೇರಿ ಅನೇಕ ರೀತಿಯ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಪೊಲೀಸರು ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್ ಅವರು, ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ತಕ್ಷಣವೇ ತಡೆಯಬೇಕು. ಇಲ್ಲವಾದಲ್ಲಿ ಜನಸಾಮಾನ್ಯರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಟಿ. ಶ್ರೀನಿವಾಸ್ ಮೋತ್ಕರ್, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ಹನುಮಂತಪ್ಪ ಹಾಗೂ ಪಕ್ಷದ ಮುಖಂಡರು - ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್