

ಬಳ್ಳಾರಿ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ಸಾರ್ವಜನಿಕರ ಕುಂದುಕೊರತೆ ಸಭೆಯು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಡಿಟೋರಿಯಂನಲ್ಲಿ ಡಿಸೆಂಬರ್ 23ರ ಮಂಗಳವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.
ಈ ಕುರಿತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಮತ್ತು ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ಮಾಹಿತಿ ನೀಡಿದ್ದು, ಈ ಸಭೆಯಲ್ಲಿ ಬಳ್ಳಾರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾಗಿರುವ ಡಾ. ಶೋಭಾರಾಣಿ ವಿ.ಜೆ. ಅವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು, ಸಂಘ-ಸಂಸ್ಥೆಗಳವರು ಈ ಸಭೆಯಲ್ಲಿ ಪಾಲ್ಗೊಂಡು ಗೃಹ ಇಲಾಖೆಯ ಕುಂದುಕೊರತೆಗಳ ಕುರಿತು ನಡೆಯುವ ಚರ್ಚೆಯಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್