


ಬಳ್ಳಾರಿ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯ ಮೂಲ ಸ್ವರೂಪವನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಬಳ್ಳಾರಿ ಜಿಲ್ಲಾ ಘಟಕವು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರದ ಕೃಷಿ ಸಚಿವರಾಗಿದ್ದ ಚತುರಾನನ್ ಮಿಶ್ರಾ ಅವರ ದೂರದೃಷ್ಠಿಯಿಂದಾಗಿ ನರೇಗಾ ಯೋಜನೆ ಜಾರಿಯಾಗಿತ್ತು. ಈಗ, ಈ ಯೋಜನೆಯ ಮೂಲ ಆಶಯವನ್ನೇ ಬುಡಮೇಲು ಮಾಡುವ ಕೃತ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕಾರಣ ಸರ್ಕಾರ ನರೇಗಾದ ಮೂಲ ಆಶಯವನ್ನು ಉಳಿಸಿಕೊಳ್ಳಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್