ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ; ಡಿ. 26ರಂದು ಪೂರ್ವಭಾವಿ ಸಭೆ
ಕಚೇರಿ
ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ; ಡಿ. 26ರಂದು ಪೂರ್ವಭಾವಿ ಸಭೆ


ಕೊಪ್ಪಳ, 22 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜ. 15 ರಂದು ಶ್ರೀ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ಆಚರಣೆ ಸಂಬಂಧ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಡಿ. 26ರಂದು ಬೆಳಿಗ್ಗೆ 11.15 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ವಹಿಸುವರು. ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರು ಈ ಸಭೆಗೆ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande