ಅಮರಾಪುರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ- ಗ್ರಾಪಂ ಕಡೆ
ಬಳ್ಳಾರಿ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿನ, ಬಡವರ, ಶೋಷಿತರ ಪರವಾಗಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವ
ಅಮರಾಪುರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ- ಗ್ರಾಪಂ ಕಡೆ


ಅಮರಾಪುರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ- ಗ್ರಾಪಂ ಕಡೆ


ಬಳ್ಳಾರಿ, 23 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿನ, ಬಡವರ, ಶೋಷಿತರ ಪರವಾಗಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಬಳ್ಳಾರಿ ತಾಲ್ಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಅಮರಾಪುರ ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತ್ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿಗಳಿಂದ ಜನರ ಜೀವನಮಟ್ಟ ಬಹಳಷ್ಟು ಸುಧಾರಣೆಯಾಗಿದೆ. ಗ್ರಾಮದಲ್ಲಿ ಇರುವ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಯ ಉಪಯೋಗಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು. ಯಾರು ವಂಚಿತರಾಗಬಾರದು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ವಿಳಂಬ, ತೊಂದರೆಯಾಗಿದ್ದಲ್ಲಿ, ಮನೆ ಬಾಗಿಲಿಗೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯಕ್ರಮ ‘ಗ್ಯಾರಂಟಿ ನಡೆ-ಗ್ರಾಮ ಪಂಚಾಯತ್ ಕಡೆ’ ಇದಾಗಿದೆ ಎಂದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳನ್ನು ಸೂಕ್ತವಾಗಿ ಜನರಿಗೆ ತಲುಪಿಸಲಾಗುತ್ತಿದೆ. ಪಂಚ ಗ್ಯಾರಂಟಿಗಳಿಂದ ಜನರ ಜೀವನಮಟ್ಟ ಸುಧಾರಣೆ ಹಾಗೂ ಮಹಿಳಾ ಸಬಲೀಕರಣಕ್ಕೆ ದಾರಿಯಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳು ನಿಷ್ಕಾಳಜಿ ತೋರಿಸದೇ, ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗದಂತೆ ತಲುಪಿಸಬೇಕು ಎಂದರು.

ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವ ಮೊದಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ನುಡಿದಂತೆ ನಡೆದ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಾಗಿದೆ ಎಂದು ನುಡಿದರು.

ಬಳ್ಳಾರಿ ತಾಲ್ಲೂಕಿನ 61 ಗ್ರಾಮ, 3 ಕ್ಯಾಂಪ್ ಮತ್ತು ಬಳ್ಳಾರಿ ನಗರದ 11 ವಾರ್ಡ್ ಒಳಗೊಂಡಂತೆ ಕೆಳ, ಮಧ್ಯಮ, ಮೇಲ್ವರ್ಗ ಸೇರಿದಂತೆ ಯಾವುದೇ ಮತೀಯ ಭೇದವಿಲ್ಲದೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ತಲುಪಿಸಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಐ ಬಾರಿಕಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರವು ಮಹಿಳೆಯರನ್ನು ಸಶಕ್ತರನ್ನಾಗಿಸಲು ಅವರನ್ನು ಕೇಂದ್ರೀಕರಿಸಿ, ಅವರಿಗಾಗಿಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯವೇ ಮೊದಲು. ಅದರಲ್ಲಿ ಮಹಿಳೆಯರನ್ನು ಸ್ವಾವಲಂಬಿಗಳಾಗಿಸಲು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈವರೆಗೆ ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ಯೋಜನೆಗಳ ಲಾಭ ಪಡೆಯದಿರುವರು ಇದ್ದಲ್ಲಿ ಗಮನಕ್ಕೆ ತಂದರೆ ಇತ್ಯರ್ಥ ಪಡಿಸಿ ಸೌಲಭ್ಯ ತಲುಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಾಯಿತು. ಬಳಿಕ ಮಹಿಳೆಯರೊಂದಿಗೆ ಸಂವಾದ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಮರಾಪುರ ಗ್ರಾಪಂ ಅಧ್ಯಕ್ಷೆ ಭಾರತಿ ಗುರುಸ್ವಾಮಿ, ಉಪಾಧ್ಯಕ್ಷ ಜಿ.ಗಾದಿಲಿಂಗಪ್ಪ, ಅಮರಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಸೇರಿದಂತೆ ಗ್ರಾಪಂ ಸದಸ್ಯರು, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು, ಪಕ್ಷದ ಮುಖಂಡರು, ಗ್ರಾಮದ ಮುಖಂಡರು, ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande