ಬಾಲ ಕಾರ್ಮಿಕ ಪದ್ಧತಿ ಅಪರಾಧ : ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಪದ್ದತಿ ಯೋಜನೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮ
ಬಾಲಕಾರ್ಮಿಕ ಪದ್ಧತಿ ಅಪರಾಧ: ನ್ಯಾ.ರಾಜೇಶ್ ಎನ್.ಹೊಸಮನೆ


ಬಾಲಕಾರ್ಮಿಕ ಪದ್ಧತಿ ಅಪರಾಧ: ನ್ಯಾ.ರಾಜೇಶ್ ಎನ್.ಹೊಸಮನೆ


ಬಳ್ಳಾರಿ, 23 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಪದ್ದತಿ ಯೋಜನೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು ಎಸ್‍ಸಿ/ಎಸ್‍ಟಿ ಜನಾಂಗದವರು ವಾಸಿಸುವ ಕಾಲೋನಿಗಳಲ್ಲಿ ಅರಿವು ಮೂಡಿಸುವ ಜನಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಮತ್ತು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಅಪರಾಧವಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣವು ಎಷ್ಟು ಮುಖ್ಯವೋ, ಅμÉ್ಟೀ ಮುಖ್ಯವಾಗಿ ಅವರನ್ನು ಶೋಷಣೆಯಿಂದ ರಕ್ಷಿಸುವುದು ಕೂಡ ಸರ್ಕಾರದ ಮತ್ತು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಆಧುನಿಕ ಕಾಲಘಟ್ಟದಲ್ಲೂ ಬಡತನ ಮತ್ತು ಅರಿವಿನ ಕೊರತೆಯಿಂದಾಗಿ ಅನೇಕ ಮಕ್ಕಳು ಶಾಲೆಯ ಮೆಟ್ಟಿಲು ಹತ್ತುವ ಬದಲು ಕಾರ್ಖಾನೆ ಅಥವಾ ಹೋಟೆಲ್‍ಗಳ ಮೆಟ್ಟಿಲು ಹತ್ತುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಮಾತನಾಡಿ, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಅಗತ್ಯವಾಗಿದ್ದು, ಅವರನ್ನು ಕೆಲಸಕ್ಕೆ ದೂಡದೇ ಶಿಕ್ಷಣ ನೀಡಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರೆ ನೀಡಿದರು.

ಸಮಾಜದ ಅತ್ಯಂತ ದುರ್ಬಲ ವರ್ಗಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸಿಸುವ ಕಾಲೋನಿಗಳಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಬಗ್ಗೆ ಆಟೋ ಪ್ರಚಾರದ ಮೂಲಕ ಜನಜಾಗೃತಿ ಮೂಡಿಸುವುದು ಅತ್ಯಂತ ಶ್ಲಾಘನೀಯ ಮತ್ತು ತುರ್ತು ಅಗತ್ಯವಿರುವ ಕಾರ್ಯಕ್ರಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ್, ಕಾರ್ಮಿಕ ನಿರೀಕ್ಷಕರಾದ ರಮೇಶ್, ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಇಲಾಖೆ ಅಧಿಕಾರಿಗಳು, ಇತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande