ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ : ಬೊಮ್ಮಾಯಿ
ಕಲಬುರಗಿ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಅಂತ ಕೆಪಿಸಿಸಿ ಉಪಾಧ್ಯಕ್ಷರೇ ಸ್ವತಃ ಪತ್ರ ಬ
ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ : ಬೊಮ್ಮಾಯಿ


ಕಲಬುರಗಿ, 23 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್ ನಾಯಕರ ಕುರ್ಚಿ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇದು ನಾವು ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಅಂತ ಕೆಪಿಸಿಸಿ ಉಪಾಧ್ಯಕ್ಷರೇ ಸ್ವತಃ ಪತ್ರ ಬರೆದಿದ್ದಾರೆ. ಯಾವ ಸರಕಾರ ಸ್ಥಿರ ಇರಲ್ಲವೋ ಸಹಜವಾಗಿಯೇ ಅಭಿವೃದ್ದಿ ಕುಂಠಿತವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಹೈ ಇದೆ. ಕಮಾಂಡ್ ಇಲ್ಲವೇ ಇಲ್ಲ ಕಾಂಗ್ರೆಸ್ ನಲ್ಲಿ ಗೊಂದಲ‌ ಇದೆ. ಇದರಲ್ಲಿ ಎರಡು ಮಾತಿಲ್ಲ ಕಾಂಗ್ರೆಸ್ ಹೈಕಮಾಂಡೇ ಎರಡು ಭಾಗ ಆಗಿ ಹೋಗಿದೆ. ರಾಜ್ಯದಲ್ಲಿ ಉಂಟಾಗಿರುವ ಗೊಂದಲದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾತ್ರ ಬಹಳ ದೊಡ್ಡದು ಇದೆ. ಕರ್ನಾಟಕ ಕಾಂಗ್ರೆಸ್ ನಾಯಕರು ಪರಿಣಿತರಿದ್ದಾರೆ. ಆದರೆ ಎಲ್ಲವೂ ಇಲ್ಲಿಂದಲೇ ಹೋಗುವಾಗ ಹೈಕಮಾಂಡ್ ಮಾತು ಯಾಕೆ ಇವರು ಕೇಳುತ್ತಾರೆ ಎಂದು ಪ್ರಶ್ನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande