ಜನಸ್ನೇಹಿ ಆಡಳಿತಕ್ಕೆ ಅಪರ ಜಿಲ್ಲಾಧಿಕಾರಿಗಳ ಮಂಗಳ ಮನವಿ
ಜನಸ್ನೇಹಿ ಆಡಳಿತಕ್ಕೆ ಅಪರ ಜಿಲ್ಲಾಧಿಕಾರಿಗಳ ಮಂಗಳ ಮನವಿ
ಭಾರತ ಸರ್ಕಾರದ ಆಡಳಿತ ಸುಧಾರಣೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಸುಶಾಸನ ಸಪ್ತಾಹವನ್ನು ಅಪರ ಜಿಲ್ಲಾಧಿಕಾರಿ ಮಂಗಳ ಉದ್ಘಾಟಿಸಿದರು.


ಕೋಲಾರ, ೨೩ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸುಶಾಸನ ಸಪ್ತಾಹ - ಪ್ರಶಾಸನ ಗ್ರಾಮಗಳ ಕಡೆಗೆ ಅಭಿಯಾನದ ಅಂಗವಾಗಿ ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎಲ್ಲಾ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಿತು.

ಅಪರ ಜಿಲ್ಲಾಧಿಕಾರಿ ಎಸ್ ಎಂ ಮಂಗಳ ಅವರು ಡಿಸೆಂಬರ್ ೧೯ ರಿಂದ ೨೫ ರವರೆಗೆ ನಡೆಯುತ್ತಿರುವ ಈ ವಿಶೇಷ ಅಭಿಯಾನವು ಗ್ರಾಮೀಣ ಭಾಗದ ಜನರಿಗೆ ಆಡಳಿತವನ್ನು ಹತ್ತಿರವಾಗಿಸುವ ಗುರಿಯನ್ನು ಹೊಂದಿದೆ ಎಂದರು.

ಸರ್ಕಾರದ ಸೇವೆಗಳು ಮತ್ತು ಸೌಲಭ್ಯಗಳು ಗ್ರಾಮೀಣ ನಿವಾಸಿಗಳಿಗೆ, ವಿಶೇಷವಾಗಿ ಆರೋಗ್ಯ, ಶಿಕ್ಷಣ ಮತ್ತು ಆಹಾರ ಭದ್ರತೆಯಂತಹ ಕ್ಷೇತ್ರಗಳಲ್ಲಿ ಸುಲಭವಾಗಿ ದೊರೆಯುವಂತೆ ಮಾಡುವುದು.

ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ಜನಸಾಮಾನ್ಯರಿಗೆ ಉತ್ತರದಾಯಿಯಾದ ವ್ಯವಸ್ಥೆಯನ್ನು ರೂಪಿಸುವುದು.

ಇ-ಗ್ರಾಮ್ ಮತ್ತು ನೇರ ನಗದು ವರ್ಗಾವಣೆಯಂತಹ ಡಿಜಿಟಲ್ ತಂತ್ರಜ್ಞಾನಗಳ ಮೂಲಕ ಸೇವಾ ವಿತರಣೆಯನ್ನು ಉತ್ತಮಪಡಿಸುವುದು. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನರನ್ನೊಳಗೊಂಡAತೆ ಸಮಾಜದ ಎಲ್ಲಾ ವರ್ಗದ ಜನರನ್ನು ಅಭಿವೃದ್ಧಿ ಯೋಜನೆಗಳಲ್ಲಿ ಸೇರಿಸಿಕೊಳ್ಳುವುದು ಈ ಯೋಜನೆಯ ಪ್ರಮುಖ ಅಂಶಗಳು ಎಂದರು.

ಆಯಾ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಕೈಗೊಳ್ಳುತ್ತಿರುವ ಯೋಜನೆಗಳ ಬಗ್ಗೆ ಪಿ.ಪಿ.ಟಿ ಮೂಲಕ ವಿವರಿಸಲು ಸೂಚಿಸಲಾಯಿತು. ಅಭಿಯಾನದ ಅವಧಿಯಲ್ಲಿ ಗ್ರಾಮಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಛಾಯಾಚಿತ್ರಗಳು ಮತ್ತು ವಿವರಗಳನ್ನು ಒಳಗೊಂಡ ಬುಕ್‌ಲೆಟ್ ಅನ್ನು ಸಿದ್ಧಪಡಿಸಿ ಸಲ್ಲಿಸಲು ತಿಳಿಸಲಾಯಿತು. ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಮುದಾಯಗಳನ್ನು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್ ಮತ್ತು ಎನ್ ಐ ಸಿ ಯ ಜಿಲ್ಲಾ ಅಧಿಕಾರಿ ಸಾಗರ್, ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ : ಭಾರತ ಸರ್ಕಾರದ ಆಡಳಿತ ಸುಧಾರಣೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಸುಶಾಸನ ಸಪ್ತಾಹವನ್ನು ಅಪರ ಜಿಲ್ಲಾಧಿಕಾರಿ ಮಂಗಳ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande