ಸುಗಟೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಕೈಚೀಲ ವಿತರಣೆ
ಸುಗಟೂರು ಸರ್ಕಾರಿ ಶಾಲೆಯ ಮಕ್ಕಳಿಗೆ ಕೈಚೀಲ ವಿತರಣೆ
ಕೋಲಾರ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಕಲಾವಿದ ಗೋ.ನಾ ಸ್ವಾಮಿ ಕೈಚೀಲ ವಿತರಿಸಿದರು.


ಕೋಲಾರ, ೨೩ ಡಿಸೆಂಬರ್ (ಹಿ.ಸ) :

ಆ್ಯಂಕರ್ : ತಾಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಎಂ.ಡಿ ಕೌಶಿಕ್ ನೇತೃತ್ವದಲ್ಲಿ ವಿಶೇಷ ಕೈಚೀಲಗಳನ್ನು ವಿತರಿಸಿದರು.

ಗೋ.ನಾ ಸ್ವಾಮಿ ಮಕ್ಕಳಿಗೆ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಪೋತ್ಸಾಹ ನೀಡುವ ಉದ್ದೇಶದಿಂದ ಪ್ಲಾಸ್ಟಿಕ್ ರಹಿತವಾದ ಕೈಚೀಲದ ಬ್ಯಾಗ್ ವಿತರಿಸಲಾಗಿದೆ ಈ ವಿಶೇಷ ಬ್ಯಾಗ್ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಇನ್ನುಳಿದ ದಾಖಲಾತಿಗಳನ್ನು ಮನೆಯಲ್ಲಿ ಜೋಪಾನವಾಗಿ ಇಡಬಹುದು ಇದನ್ನು ವಿಶೇಷವಾಗಿ ಮಕ್ಕಳಿಗಾಗಿ ತಯಾರಿಸಲಾಗಿದೆ ಎಂದು ತಿಳಿಸಿದರು.

ಈ ಶಾಲೆಯೂ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಸುಮಾರು ೧೯೩೫ ರಲ್ಲಿ ಪ್ರಾರಂಭವಾಗಿ ಇಂದಿಗೆ ೯೦ ವರ್ಷ ತುಂಬಿದ್ದು ಶಾಲೆಗಾಗಿ ದುಡಿದ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮವನ್ನು ಮಾಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ನಾಗರಾಜ್ ಸಹ ಶಿಕ್ಷಕರು ಸಿಬ್ಬಂದಿ ಇದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಕಲಾವಿದ ಗೋ.ನಾ ಸ್ವಾಮಿ ಕೈಚೀಲ ವಿತರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande