
ವಿಜಯಪುರ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.
ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ನಿವಾಸ ಸೇರಿ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಸವನ ಬಾಗೇವಾಡಿ ಕೃಷಿ ಎಡಿ ಮಾಳಪ್ಪ ಯರಝರಿ ನಿವಾಸದ ಮೇಲೆ ದಾಳಿ ಮಾಡಿದ್ದು, ವಿಜಯಪುರದ ಜಲನಗರ ನಿವಾಸ, ಬಸವನ ಬಾಗೇವಾಡಿ ತೋಟದ ಮನೆ, ಕಚೇರಿ, ಮಾವನ ಮನೆಯ ಮೇಲು ರೇಡ್ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande