
ಭೋಪಾಲ್, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಮಧ್ಯ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಅವರು ಧಾರ್ ಮತ್ತು ಬೇತುಲ್ ಜಿಲ್ಲೆಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ನಿರ್ಮಿಸಲಾಗುವ ವೈದ್ಯಕೀಯ ಕಾಲೇಜುಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಒಟ್ಟು ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಈ ಪೈಕಿ ಧಾರ್ ಮತ್ತು ಬೇತುಲ್ ಜಿಲ್ಲೆಗಳ ಎರಡು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರ ಸಚಿವ ನಡ್ಡಾ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದರ ಜೊತೆಗೆ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೂ ಚಾಲನೆ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa