ನಕಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ : ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾ
Dc


ಧಾರವಾಡ, 23 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಅನೇಕರು ಮಾಧ್ಯಮದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳನ್ನು ಹೆದರಿಸುವ, ಒತ್ತಡಕ್ಕೆ ಒಳಪಡಿಸುವ ಕಾರ್ಯಮಾಡುತ್ತಿದ್ದು, ಸರ್ಕಾರಿ ನೌಕರರಲ್ಲಿ ಮಾಧ್ಯಮಗಳ ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರಿಗೆ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ 2025-28 ನೇ ಅವಧಿಯ ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು.

ಸರ್ಕಾರದ ಇಲಾಖೆಗಳಿಗೆ ಮಾಧ್ಯಮದ ಹೆಸರಿನಲ್ಲಿ ಇತರರು ಭೇಟಿ ನೀಡಿ, ಮಾಹಿತಿ ಕೇಳುವ ಅಥವಾ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ಹೆಸರಿನಲ್ಲಿ ಹೆದರಿಸುವ, ಹಣ ಕೇಳುವ ಘಟನೆಗಳು ಜರಗುತ್ತಿವೆ. ಬೇರೆ ಜಿಲ್ಲೆಗಳಿಗೆ ಹೊಲಿಸಿದಾಗ ಧಾರವಾಡ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆ. ಆದರೂ ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಠಿಯಿಂದ ಸಿಗಬೇಕಾದ ಮಾಹಿತಿ ಮತ್ತು ಗೌರವ ನೀಡಲು ಅಧಿಕಾರಿ, ಸಿಬ್ಬಂದಿಗಳಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande