ನವದೆಹಲಿಯ ಬಾಂಗ್ಲಾ ಹೈಕಮಿಷನ್ ಎದುರು ವಿಎಚ್‌ಪಿ ಪ್ರತಿಭಟನೆ
ನವದೆಹಲಿ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಯುವಕನ ಕ್ರೂರ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ದೆಹಲಿಯ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದರು. ಬಾಂಗ್ಲಾದೇಶದಲ್
Protest


ನವದೆಹಲಿ, 23 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಯುವಕನ ಕ್ರೂರ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ದೆಹಲಿಯ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದರು.

ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ನಂತರ ಉಂಟಾದ ಅಶಾಂತಿಯ ವೇಳೆ, ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತರು ಉಗ್ರಗಾಮಿ ಗುಂಪುಗಳಿಗೆ ಗುರಿಯಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೇ ಹಿಂಸಾಚಾರದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರನ್ನು ಗುಂಪೊಂದು ಹಲ್ಲೆ ನಡೆಸಿ ಕೊಂದು, ಬಳಿಕ ಅವರ ದೇಹವನ್ನು ಸುಟ್ಟುಹಾಕಲಾಗಿದೆ ಎನ್ನಲಾಗಿದೆ. ಈ ಅಮಾನುಷ ಕೃತ್ಯ ಭಾರತದಲ್ಲಿ ತೀವ್ರ ಖಂಡನೆಗೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ವಿಎಚ್‌ಪಿ ಮತ್ತು ಬಜರಂಗ ದಳದ ಕಾರ್ಯಕರ್ತರು ಇಂದು ಬಾಂಗ್ಲಾದೇಶ ಹೈಕಮಿಷನ್ ಎದುರು ಸೇರಿ ಪ್ರತಿಭಟನೆ ನಡೆಸಿದರು. “ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಸಹಿಸಲಾಗುವುದಿಲ್ಲ” ಎಂಬ ಘೋಷಣೆಗಳನ್ನು ಹಾಕಿದರು.

ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜೊತೆಗೆ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗಳನ್ನು ಗಡೀಪಾರು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande