


ಕೊಪ್ಪಳ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಈ ತಿಂಗಳ ಡಿಸೆಂಬರ್ ವರೆಗೆ ಹತ್ತು ಕೋಟಿ ಮಹಿಳೆಯರು ಉಚಿವಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಇದಕ್ಕಾಗಿ ಅಂದಾಜು 375 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬ0ಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದ್ದು, ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರವು ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿದಿ, ಈ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮ ಪ್ರಗತಿ ಸಾಧಿಸಿದೆ. ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ಹತ್ತು ಕೋಟಿ ದಾಟಿದ್ದು ಇದರಿಂದ ಬಡ ಮತ್ತು ಸಾಮಾನ್ಯ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದರು.
ಪಂಚ ಗ್ಯಾರಂಟಿ ಕುರಿತು ಕಾಲೇಜು ಹಂತದಲ್ಲಿ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸರ್ಕಾರದ ಈ ಮಹತ್ವದ ಯೋಜನೆಗಳ ಬಗ್ಗೆ ಮತ್ತಷ್ಟು ಜನ ಸಾಮಾನ್ಯರಲ್ಲಿ ಪ್ರಚಾರ ಆಗುವಂತೆ ಕ್ರಮ ವಹಿಸಿ ಎಂದು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ನ್ಯಾಯ ಬೆಲೆ ಅಂಗಡಿಗಳಿಗೆ ಹೋಗಿ ಅಕ್ಕಿ ತರಲು ಸಾದ್ಯವಿಲ್ಲದ ಹಿರಿಯ ನಾಗರಿಕರ ಮನೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಲುಪಿಸಲು ನ್ಯಾಯ ಬೆಲೆ ಅಂಗಡಿಗಳ ಮಾಲೀಕರಿಗೆ ತಿಳಿಸಿ ಎಂದು ಅಧಿಕಾರಿಗೆ ಸೂಚನೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಕಾರಣಗಳಿಂದಾಗಿ ಗೃಹ ಲಕ್ಷ್ಮೀ ಹಣ ಜಮೆಯಾಗದೆ ಇರುವವರನ್ನು ಗುರುತಿಸಿ ಸಮಸ್ಯೆ ಪರಿಹರಿಸಿ, ಆದಷ್ಟು ಬೇಗ ಅರ್ಹ ಫಲಾನುಭವಿಗೆ ಹಣ ತಲುಪುವಂತೆ ಕ್ರಮ ವಹಿಸಿ, ಇದರ ಜತೆಗೆ ಸರ್ಕಾರದ ಯಾವುದೇ ಯೋಜನೆ ಇರಲಿ ಅದು ಅರ್ಹ ಫಲಾನುಭವಿಗಳೆಗೆ ತಲುಪಬೇಕು. ಸರ್ಕಾರದ ಯೋಜನೆಗಳು ದುರುಪಯೋಗ ಆಗದಂತೆ ನಿಗವಹಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. 2025 ನೇ ಸಾಲಿನ ಸೆಪ್ಟೆಂಬರ್ ತಿಂಗಳ ಗೃಹಲಕ್ಷಿö್ಮÃ ಹಣ 63 ಕೋಟಿ, 90 ಲಕ್ಷ, 34 ಸಾವಿರ ರೂ. ಗಳನ್ನು ಫಲಾನುಭವಿಗಳ ಖಾತೆಗೆ
ಜಮೆ ಮಾಡಲಾಗಿದೆ ಎಂದು ತಿಳಿಸಿದರು.
ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಗ್ರಾಮ ಪಂಚಾಯತಿ ಹಂತದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಂದಲೆ, ಈ ಯೋಜನೆಯಿಂದ ಆದ ಲಾಭದ ಮಾಹಿತಿ ಪಡೆಯುವ ಕೆಲಸ ಮಾಡಬೇಕು. ಈ ಯೋಜನೆಯ ಹಣವನ್ನು ಅವರು ಯಾವ ರೀತಿ ಸದುಪಯೋಗ ಮಾಡಿಕೊಳ್ಳಬೇಕು ಎನ್ನುವುದರ ಜತೆಗೆ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಹೇಳಿದರು.
*ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ:* ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,19,665 ಫಲಾನುಭವಿಗಳಿಗೆ ಆಗಸ್ಟ್-2025ರ ಅಂತ್ಯದವರೆಗೆ ಡಿಬಿಟಿ ಮೂಲಕ 63,93,30,000 ರೂ.ಗಳನ್ನು ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ನವೆಂಬರ್-2025ರ ಅಂತ್ಯದವರೆಗೆ 2,96,448 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 326.02 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 36,002 ಅಂತ್ಯೋದಯ (ಎಎವೈ), 38,337 ಎನ್.ಪಿ.ಹೆಚ್.ಹೆಚ್ (ಬಿಪಿಎಲ್) ಮತ್ತು 2,81,886 ಪಿ.ಹೆಚ್.ಹೆಚ್ (ಬಿಪಿಎಲ್) ಕಾರ್ಡ್ಗಳಿದ್ದು, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2025ರ ಡಿಸೆಂಬರ್ ಮಾಹೆಯಿಂದ ಇಲ್ಲಿಯವರೆಗೂ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.
ಶಕ್ತಿ ಯೋಜನೆಯಡಿ 2025ರ ನವೆಂಬರ್ ಮಾಹೆಯಲ್ಲಿ 10 ಕೋಟಿ ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 358,34,17,496 ರೂ.ಗಳ ಖರ್ಚಾಗಿದೆ.
ಯುವನಿಧಿ ಯೋಜನೆಯಡಿ ಪ್ರಸ್ತುತ 11,945 ಫಲಾನುಭವಿಗಳು ನೋಂದಣಿಯಾಗಿದ್ದು, ಜುಲೈ ಅಂತ್ಯದವರೆಗೆ ಒಟ್ಟು ಮೊತ್ತ ರೂ. 19,25,97,000 ಕೋಟಿಗಳನ್ನು ಪಾವತಿಸಲಾಗಿರುತ್ತದೆ. ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆಯಡಿಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಈಗಾಗಲೆ 34 ಅಭ್ಯರ್ಥಿಗಳಿಗೆ 30ದಿನದ ಡಾಟಾ ಎಂಟ್ರಿ ಆಪರೇಟರ್ ತರಬೇತಿ ನೀಡಲಾಗಿದೆ ಎಂದು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ, ಮತ್ತು ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ತಾಲ್ಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್