
ಕೊಪ್ಪಳ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್‌ಗೌಡ ಜಿ. ರಾಮತ್ನಾಳ್ ಅವರು ಡಿಸೆಂಬರ್ 24 ರಂದು ಕೊಪ್ಪಳದಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಡಿಸೆಂಬರ್ 24 ರಂದು ಬೆಳಿಗ್ಗೆ 8 ಗಂಟೆಗೆ ಹಿರೇಅರಳಿಹಳ್ಳಿಯಿಂದ ಹೊರಟು, ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ರವರೆಗೆ ಕೊಪ್ಪಳ ಜಿಲ್ಲಾ ಪಂಚಾಯತನ ಜಿ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾದ ವಿ.ಆರ್.ಡಬ್ಲ್ಯೂ-ಎಂ.ಆರ್.ಡಬ್ಲ್ಯೂ ಮತ್ತು ಯು.ಆರ್.ಡಬ್ಲ್ಯೂ ನವರಿಗೆ ಆರ್.ಟಿ.ಇ ಪೋಕ್ಸೋ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಕುರಿತಾದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು. ಅಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ವಸತಿ ನಿಲಯ, ಶಾಲೆ, ಕೋಚಿಂಗ್ ಸೆಂಟರ್, ಪೊಲೀಸ್ ಠಾಣೆ, ಜಿಲ್ಲಾ ಆಸ್ಪತ್ರೆ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ಹಾಗೂ ಪರಿಶೀಲನೆ ಮಾಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್