
ಗದಗ, 24 ಡಿಸೆಂಬರ್ (ಹಿ.ಸ.)
ಆ್ಯಂಕರ್:
ಗದಗ ನಗರದ ದಿ. ಗದಗ ಕೋ. ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಗದಗ ಜಿಲ್ಲಾ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅಯ್ಯಪ್ಪಸ್ವಾಮಿ ಪೂಜಾ ಕಾರ್ಯಕ್ರಮ 25-12-2025ರಂದು ಸಂಜೆ 6.30ಕ್ಕೆ ಜರುಗಲಿದೆ.
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ನೇತೃತ್ವ ವಹಿಸುವರು.
ಅಯ್ಯಪ್ಪಸ್ವಾಮಿ ಎಲ್ಲಾ ಮಾಲಾಧಾರಿಸ್ವಾಮಿಗಳು ಪೂಜೆಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದಿ. ಗದಗ ಕೋ. ಆಪ್ ಕಾಟನ್ ಸೇಲ್ ಸೊಸೈಟಿ ಚೇರಮನ್ ರವಿ ಮೂಲಿಮನಿ, ಗದಗ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP