
ಗದಗ, 24 ಡಿಸೆಂಬರ್ (ಹಿ.ಸ.)
ಆ್ಯಂಕರ್:
ಗದಗ ನಗರದ ಗಾಂಧಿ ವ್ರತ್ತದಲ್ಲಿ ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ಮಾತನಾಡಿ ಇದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಎಂದು ಮಾತನಾಡಿದರು.
ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಎಸ್.ಕರೀಗೌಡ್ರ ಮಾತನಾಡಿ ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ; ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೆÇಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ ಎಂದರು.
ಜಿಲ್ಲಾ ಪ್ರಧಾನಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ ಈ ವಿಧೆಯಕದರಡಿ ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದರು.
ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ ಮತ್ತು ಗದಗ ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ ಮಾತನಾಡಿ ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು; ಕಾನೂನು ಕ್ರಮ ಕೈಗೊಳ್ಳಬಹುದು. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ.
ಈ ದೇಶದ ನಾಗರಿಕರ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಈ ಕಾನೂನು ನಾಗರೀಕರ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ; ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ನೀಡಕೂಡದು ಎಂದು ಸಂದರ್ಭೋಚಿತವಾಗಿ ಮಾತನಾಡಿದರು.
ಜಿಲ್ಲಾ ವಕ್ತಾರ ಎಂ.ಎಂ.ಹಿರೇಮಠ ಮಾತನಾಡಿ ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಮ್ಮನ್ನು, (ಬಿಜೆಪಿ), ನಮ್ಮ ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ದಮನ ಮಾಡಲು ಸರಕಾರ ಹೊರಟಿದೆಎಂದು ಗಮನ ಸೆಳೆಯುತ್ತಿದ್ದೇವೆ. ಇದರ ವಿರುದ್ಧ ಜಾಗೃತಿ ಮೂಡಿಸಲು ಈ ಪ್ರತಿಭಟನೆ ನಡೆದುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಎಸ್.ಚಿಂಚಲಿ, ಸಿದ್ದು ಪಲ್ಲೇದ, ವಿಜಯಕುಮಾರ ಗಡ್ಡಿ, ಅನೀಲ ಅಬ್ಬಿಗೇರಿ, ಅಶೋಕ ಕುಡತಿನಿ ದಶರಥರಾಜ ಕೊಳ್ಳಿ, ಚಂದ್ರು ತಡಸದ, ಶಿವು ಹಿರೇಮನಿಪಾಟೀಲ, ಅಮರನಾಥ ಗಡಗಿ, ಸುರೇಶ ಮರಳಪ್ಪನವರ, ಸುರೇಶ ಚಿತ್ತರಗಿ, ಶಂಕರ ಕಾಕಿ, ಮಾಂತೇಶ ನಲವಡಿ, ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಸಂತೋಷ ಅಕ್ಕಿ, ವಿಜಯಲಕ್ಷ್ಮೀ ಮಾನ್ವಿ, ಮಹಾದೇವಪ್ಪ ಚಿಂಚಲಿ, ವಾಯ್.ಪಿ.ಅಡ್ನೂರ, ಬಸವರಾಜ ಬಡಿಗೇರ, ಮಾಂತೇಶ ಬಾತಾಖಾನಿ, ವಿಶ್ವನಾಥ ಹಳ್ಳಿಕೇರಿ, ಮುತ್ತಣ್ಣ ಮೂಲಿಮನಿ, ಮಹೇಶ ಕಮ್ಮಾರ, ರಮೇಶ ಸಜ್ಜಗಾರ, ಶಂಕರ ಕಾಕಿ, ಶಂಕರ ಕರಿಬಿಷ್ಠಿ, ವಾಯ್.ಪಿ.ಅಡ್ನೂರ, ಮಹೇಶ ಶಿರಹಟ್ಟಿ, ರಾಚಯ್ಯ ಹೊಸಮಠ, ಅಪ್ಪಣ್ಣ ಟೆಂಗಿನಕಾಯಿ, ನಾಗರಾಜ ಮದ್ನೂರ, ಕವಿತಾ ಬಂಗಾರಿ, ಸುಮಂಗ ತಕ್ಕಲಕೋಟಿ, ಲಲಿತಾ ಉಮಚಗಿ, ಬಸವರಾಜ ನರೆಗಲ್, ವಿನಾಯಕ ಹೊರಕೇರಿ, ವಿರೇಶ ಗದಗಿನ, ನವೀನ ಕುರ್ತಕೋಟಿಮಠ, ಛಗನ ರಾಜಪುರೊಹಿತ್, ಸುರೇಶ ಚವ್ಹಾಣ, ಮೋಹನ ಕೋರಿ, ಸಂಜೀವ ಖಟವಟೆ, ವಸಂತ ಹಬೀಬ, ಬಸಯ್ಯ ಸಾಸ್ವಿಹಳ್ಳಿಮಠ, ಲಕ್ಷ್ಮಣ ರಣತೂರ, ಡಿ.ಬಿ.ಕರೀಗೌಡ್ರ, ಅಪ್ಪು ನಮಸ್ತೆಮಠ, ವಿನೋದ ಹಂಸನೂರ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP