

ತೆಕ್ಕಲಕೋಟೆ, 24 ಡಿಸೆಂಬರ್ (ಹಿ.ಸ.)
ಆ್ಯಂಕರ್ : ತಮಿಳುನಾಡಿನಲ್ಲಿರುವ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ದಟ್ಟವಾದ ಮಂಜಿನ ಕಾರಣ ಚಾಲಕನಿಗೆ ಬುಧವಾರ ನಸುಕಿನಲ್ಲಿ ರಸ್ತೆ ಕಾಣದ ಕಾರಣ ತೆಕ್ಕಲಕೋಟೆ ಸಮೀಪದ ದೇವೀನಗರ ವ್ಯಾಪ್ತಿಯಲ್ಲಿ ರಸ್ತೆ ಬದಿಯ ಕಂದಕ್ಕೆ ಬಿದ್ದ ಕಾರಣ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ನಿಟ್ಟೂರಿನ ಪ್ರಸಾದ್‍ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್‍ಗೆ ದಾಖಲಿಸಲಾಗಿದ್ದು, ಇವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಬುಧವಾರ ನಸುಕಿನಲ್ಲಿ ದಟ್ಟವಾದ ಮಂಜು ಮುಸುಕಿದ್ದ ಕಾರಣ ರಸ್ತೆ ಕಾಣದೇ ಕಾರು ತೆಕ್ಕಲಕೋಟೆ ಸಮೀಪದ ದೇವೀನಗರದ ಸಮೀಪಕ್ಕೆ ಆಗಮಿಸುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿರುವ ಕಾರಣ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಕ್ಕಲಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್