ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಿ: ಡಾ.ದುರಗೇಶ್ ಕೆ.ಆರ್
ಗದಗ, 24 ಡಿಸೆಂಬರ್ (ಹಿ.ಸ.) ಆ್ಯಂಕರ್: ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವ ಮಾನವ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಡಿಸೆಂಬರ್ 29 ಬೆಳಿಗ್ಗೆ 11 ಗಂಟೆಗೆ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ
ಫೋಟೋ


ಗದಗ, 24 ಡಿಸೆಂಬರ್ (ಹಿ.ಸ.)

ಆ್ಯಂಕರ್:

ರಾಷ್ಟ್ರಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವ ಮಾನವ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಡಿಸೆಂಬರ್ 29 ಬೆಳಿಗ್ಗೆ 11 ಗಂಟೆಗೆ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ರಾಷ್ಟಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವ ಮಾನವ ದಿನಾಚರಣೆ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಬರಹಗಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಗೆ ಶೋಭೆ ತರಬೇಕು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಹಿರಿಯ, ಕಿರಿಯ ಹಾಗೂ ಮಹಿಳಾ ಬರಹಗಾರರನ್ನು ಸನ್ಮಾನಿಸುವ ಕಾರ್ಯಕ್ರಮ ಈ ಸಂದರ್ಭದಲ್ಲಿ ಜರುಗಲಿದೆ. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ರಾಷ್ಟçಕವಿ ಕುವೆಂಪು ಅವರ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು. ಒಟ್ಟಾರೆಯಾಗಿ ವಿಶ್ವ ಮಾನವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಬೇಕೆಂದರು.

ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ ವಿಷಯಗಳ ಕುರಿತು ಚರ್ಚಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿ ವಂದಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಾಹಿತಿಗಳು , ಬರಹಗಾರರು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande