ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ : ಪೂರ್ವಸಿದ್ಧತಾ ಸಭೆ
ಗದಗ, 24 ಡಿಸೆಂಬರ್ (ಹಿ.ಸ.) ಆ್ಯಂಕರ್: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಜನೆವರಿ 1 ರಂದು ಬೆಳಿಗ್ಗೆ 1
ಫೋಟೋ


ಗದಗ, 24 ಡಿಸೆಂಬರ್ (ಹಿ.ಸ.)

ಆ್ಯಂಕರ್:

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

ಜನೆವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಅನುಮತಿ ಪಡೆದು ಸಮುದಾಯದ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಅಧ್ಯಕ್ಷರು, ಪ್ರಮುಖರು, ಹಿರಿಯರು, ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande