ಪಿಹೆಚ್.ಡಿ ಫೆಲೋಶಿಪ್‍ಗೆ ಅರ್ಜಿ ಆಹ್ವಾನ
ರಾಯಚೂರು, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನವನ್ನು ಪ್ರಾರಂಭಿಸಿರುವ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್‍ಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿ
ಪಿಹೆಚ್.ಡಿ ಫೆಲೋಶಿಪ್‍ಗೆ ಅರ್ಜಿ ಆಹ್ವಾನ


ರಾಯಚೂರು, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನವನ್ನು ಪ್ರಾರಂಭಿಸಿರುವ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್‍ಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-02-2025 ಮತ್ತು ಆದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳು ಕರ್ನಾಟಕ ಶಾಸಬದ್ದ ವಿಶ್ವ ವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‍ಲೈನ್ ಮೂಲಕ ಜನವರಿ 09ರ ಸಂಜೆ 05.30 ರೊಳಗೆ ಅರ್ಜಿಯನ್ನು ಜಿಲ್ಲಾ ಕಚೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ವಿಳಾಸ: https://bcwd.karnataka.gov.in ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 8050770004, 08532295996ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande