
ಬಳ್ಳಾರಿ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/11ಕೆ.ವಿ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಡಿ.27 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-52 ಶಂಕರಬಂಡೆ ಐಪಿ ಫಿಡರ್ ಮಾರ್ಗದ ತಿರುಮಲ ನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಬುರ್ರನಾಯಕನಹಳ್ಳಿ ಕೃಷಿ ಪ್ರದೇಶಗಳು. ಎಫ್-53 ಶಂಕರಬಂಡೆ ಎನ್.ಜೆ.ವೈ ಮಾರ್ಗದ ತಿರುಮಲನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು.
ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಮಾರ್ಗದ ಬಿಸಲಹಳ್ಳಿ, ಜನತಾನಗರ, ಟಿ.ಬೂದಿಹಾಳ್ ಕುಡಿಯುವ ನೀರಿನ ಸ್ಥಾವರ ಗ್ರಾಮಗಳು. ಎಫ್-55 ಅಸುಂಡಿ ಐಪಿ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಗೋಡೆಹಾಳ್, ಕಕ್ಕಬೇವಿನಹಳ್ಳಿ ಕೃಷಿ ಪ್ರದೇಶಗಳು.
ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಗೋಡೆಹಾಳ್, ತಗ್ಗಿನ ಬೂದಿಹಾಳ್, ಅಸುಂಡಿ ಗ್ರಾಮಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೂಚನೆ: ಉಪ-ಕೇಂದ್ರದ ಎಲ್ಲಾ ಕೃಷಿ ಮಾರ್ಗಗಳಿಗೆ ಅಂದು ಬೆಳಿಗ್ಗೆ 04 ರಿಂದ 09 ಗಂಟೆಯವರೆಗೆ ವಿದ್ಯುತ್ ಸರಬರಾಜು ಸರಬರಾಜು ಮಾಡಲಾಗುವುದು. ಬಾಕಿ ಉಳಿದ ವಿದ್ಯುತ್ ಸರಬರಾಜನ್ನು ನಿರ್ವಹಣೆ ನಂತರ ಪೂರೈಸಲಾಗುವುದು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್