
ಗದಗ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 'ಪ್ರಭುವಿನೆಡೆಗೆ ಪ್ರಭುತ್ವ' ಎಂಬ ವಿನೂತನ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದು, ಪ್ರಜಾಪ್ರಭುತ್ವದ ಆಡಳಿತದಲ್ಲಿ ಪ್ರಜೆಗಳಿಗೆ ತೀವ್ರವಾಗಿ ಸ್ಪಂಧಿಸಿ, ಪಾರದರ್ಶಕತೆ ಮೇರೆಯಲು ಗದಗ ನಗರದಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಇಂದು ಪ್ರಪ್ರ ಕಾರ್ಯಕ್ರಮದ 6ನೇ ಎಸ್ ಒ ಎಸ್ ಲೋಕಾರ್ಪಣೆ ಮಾಡಲಾಗಿದೆ ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ಗದಗ ನಗರದ ಮುಳಗುಂದ ನಾಕಾದಲ್ಲಿ ಪ್ರಪ್ರ ಕಾರ್ಯಕ್ರಮದ 6ನೇ ಎಸ್ ಒ ಎಸ್ ಲೋಕಾರ್ಪಣೆಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮಸ್ಯೆಗೆ ಪರಿಹಾರ ತ್ವರಿತಗತಿಯಲ್ಲಿ ಆಗಬೇಕು ಎನ್ನುವ ಉದ್ದೇಶದಿಂದ ಪ್ರಭುವಿನೆಡೆಗೆ ಪ್ರಜಾಪ್ರಭುತ್ವ ಕಾರ್ಯಕ್ರಮ ಅನಿಷ್ಟಾನ ಮಾಡಲಾಗಿದೆ. ದೇಶದ ಪ್ರಜೆಗೆ ಪ್ರಭುವಿನ ಪಟ್ಟ ಇದೆ. ಪ್ರಜೆಗಳನ್ನು ಅಧಿಕಾರಸ್ಥರನ್ನಾಗಿ ಮಾಡಲಾಗುತ್ತಿದ್ದು, ತ್ವರಿತಗತಿಯಲ್ಲಿ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಇದಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಗದಗ ನಗರದಲ್ಲಿ ಈ ಕಲ್ಪನೆ ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. ಹಿಂದಿನ ಅರಸರ ಕಾಲದಲ್ಲಿ ನಾಗರಿಕರಿಗೆ ತೊಂದರೆ ಆದಾಗ ನ್ಯಾಯದ ಗಂಟೆಯನ್ನು ಭಾರಿಸಬೇಕಾಗಿತ್ತು. ಆದರೆ, ಈಗ ಕಾಲ ಬದಲಾಗಿದ್ದು, ತಂತ್ರಜ್ಞಾನಕ್ಕೆ ತಕ್ಕಂತೆ ಬಟನ್ ಒತ್ತುವ ಮೂಲಕ ಸಮಸ್ಯೆ ಬಗೆಹರಿಸಿಕೋಳ್ಳಬಹುದು. ಬಟನ್ ಒತ್ತಿದಾಕ್ಷಣ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿರುವ ಕಮಾಂಡ್ ಸೆಂಟರ್ ನವರು ಮಾಹಿತಿ ಪಡೆಯುತ್ತಾರೆ. ಜನರ ದೂರು ಆಲಿಸಿ ತಕ್ಷಣ ಸಂಬಂಧಿಸಿದವರಿಗೆ ಕಳುಹಿಸಿಕೊಡುತ್ತಾರೆ. ಇದರಿಂದ ಕೆಲವೇ ಗಂಟೆಗಳಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಾಮಾನ್ಯರು ಅಂಜಿಕೆ, ಭಯ ಇಲ್ಲದೆ ನಿರ್ಭಯವಾಗಿ ಹಾಗೂ ನಿಸ್ಸಂದೇಹದಿಂದ ದೂರು ನೀಡುವ ವಿನೂತನ ವ್ಯವಸ್ಥೆ ಇದಾಗಿದ್ದು, ಇದರಿಂದ ಆಡಳಿತ ವ್ಯವಸ್ಥೆ ಚುರುಕುಗೋಳ್ಳುತ್ತದೆ. ಇದರಿಂದ ದೂರು ನೀಡಿದ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ ಎಂದರು.
ಈ ಪ್ರಪ್ರ ಮೂಲಕ ಸಾರ್ವಜನಿಕರು ಯಾವುದೇ ನಿರ್ಭಿತಿಯಿಲ್ಲದೇ ಡಿಸಿ, ಎಸ್ಪಿ, ಸಿಇಓ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಎಚ್ ಕೆ ಪಾಟೀಲ ಎಂದರು.
ಇದೇ ವೇಳೆಯಲ್ಲಿ ನಗರದ 16ನೇ ವಾರ್ಡ್ ಪೌರ ಕಾರ್ಮಿಕರಾದ ಶ್ರೀಮತಿ ಮಂಜುಳಾ ದುರಗಪ್ಪ ಬಂಗಿ ಅವರು ಪ್ರಪ್ರ ಮೂಲಕ ತಮಗ ಮನೆ ಮಂಜೂರು ಮಾಡಿ ಕೊಡುವಂತೆ ಅಹವಾಲನ್ನು ನಿವೇಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಪ್ರಭು ಬುರಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಎಸ್ ಎನ್ ಬಳ್ಳಾರಿ, ಗಂಗಪ್ಪ ಎಂ, ಎ ಎ ಕಂಬಾಳಿಮಠ, ರಾಜಾರಾಮ್ ಪವಾರ, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP