
ಕೊಪ್ಪಳ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಕಲಬುರಗಿ ಜಿಲ್ಲೆಯಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ವಿಜೇತರಾಗಿದ್ದಾರೆ.
ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ರವರ ನಿರ್ದೇಶನದ ಮೇರೆಗೆ ರಾಜ್ಯಾದ್ಯಂತ ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾ ಕೌಶಲ್ಯ ತರಬೇತಿ, ಮೂಲ ಸೌಕರ್ಯ ಹಾಗೂ ಮಾರ್ಗದರ್ಶನ ಒದಗಿಸಲು ಕ್ರೀಡಾ ಅಭಿವೃದ್ಧಿಗೆ ಯುವ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಬೆಳೆಸುವುದಕ್ಕೆ ಹಾಗೂ ಕ್ರೀಡಾಪಟುಗಳಲ್ಲಿ ಮನೋಭಾವವನ್ನು ಅಭಿವೃದ್ಧಿಪಡಿಸಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುತ್ತದೆ.
ಅದರನ್ವಯ, ಕೊಪ್ಪಳ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಭರತ್, ಶಂಕರ, ಆನಂದ, ಪ್ರಜ್ವಲ್, ವಿಜಯ, ಗೌತಮ್, ಅಭಿಶೇಕ, ಶಾಂತ್ ಕುಮಾರ್, ಸಂತೋಷ, ರವಿರಾಜ್, ಮೋಹನ್, ನಿರುಪಾದಿ, ಸಂಜಯ್, ಧನುಷ್, ಆಕಾಶ, ಸುಷ್ಮೀತಾ, ಸಂಜನಾ, ದೀಕ್ಷಾ, ಅಮೃತಾ ಕ್ರೀಡಾಪಟುಗಳು ಕಲಬುರಗಿ ಜಿಲ್ಲೆಯಲ್ಲಿ ಜರುಗಿದ ಅಂತರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಜೇತರಾಗಿರುತ್ತಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಅವರು ವಿಜೇತ ಕ್ರೀಡಾಪಟುಗಳಿಗೆ ಶುಭ ಕೋರಿ ಮುಂಬರುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಲೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಅಥ್ಲೆಟಿಕ್ಸ್ ತರಬೇತುದಾರರರಾದ ರೋಹಿಣಿ ಪರ್ವತೀಕರ ಹಾಗೂ ವಿಶ್ವನಾಥ ಕರ್ಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್