
ವಿಜಯಪುರ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ-ಮುದ್ದೇಬಿಹಾಳ ಮುಖ್ಯರಸ್ತೆಯ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ನಿವಾಸಿ ಶಿವಪ್ಪ ರಾಮಪ್ಪ ಲಮಾಣಿ(೬೦), ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಭಾವಿ(೬೭) ಮೃತ ದುರ್ದೈವಿಗಳು.
ಸ್ಥಳಕ್ಕೆ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಶರಣಗೌಡ ಗೌಡರ, ಪಿಎಸ್‌ಐ ಶಿವಾನಂದ ಪಾಟೀಲ. ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande