ಸಂಗೊಳ್ಳಿ ರಾಯಣ್ಣ ಮೂರ್ತಿ ನಿರ್ಮಾಣಕ್ಕೆ ಆಗ್ರಹ
ವಿಜಯಪುರ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರದ ಕೇಂದ್ರ ಬಸ್ ನಿಲ್ದಾಣದ‌ ಎದುರು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಕುರುಬರ ಸಂಘದವರು ಪ್ರತಿಭಟನೆ ನಡೆಸಿದರು. ಈಗಾಗಲೇ ಕೇಂದ್ರ ಬಸ್ ನಿಲ್ದಾಣದ ಮ
ರಾಯಣ್ಣ


ವಿಜಯಪುರ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರದ ಕೇಂದ್ರ ಬಸ್ ನಿಲ್ದಾಣದ‌ ಎದುರು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಕುರುಬರ ಸಂಘದವರು ಪ್ರತಿಭಟನೆ ನಡೆಸಿದರು.

ಈಗಾಗಲೇ ಕೇಂದ್ರ ಬಸ್ ನಿಲ್ದಾಣದ ಮುಂದೆ ವೀರರಾಣಿ ಕಿತ್ತೂರ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಸ್ವಾತಂತ್ರ್ಯ ಸಮರ ಸಾರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಎಡಭಾಗದಲ್ಲಿ ಮಾಡಬೇಕು. ಇದರಿಂದ‌ ಯುವಪೀಳಿಗೆ ಸದಾ ನೆನಪು ಉಳಿಯುತ್ತದೆ. ಅಲ್ಲದೇ, ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande