
ಕೊಪ್ಪಳ, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆಯನ್ನು ಡಿಸೆಂಬರ್ 30 ರಂದು ಸಾಯಂಕಾಲ 5.15 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ವಹಿಸಿಕೊಳ್ಳುವರು. ಸಭೆಯಲ್ಲಿ ಪ್ರಾಧಿಕಾರದ ಮಾಸಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು.
ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್