
ಹೊಸಪೇಟೆ, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯು ನೂತನವಾಗಿ ನೀಡಲು ಉದ್ದೇಶಿಸಿರುವ ಸಿಎಲ್-2ಎ ಮತ್ತು ಸಿಎಲ್-9ಎ ಅಬಕಾರಿ ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ 2026ರ ಜನವರಿ 6ರಂದು ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಆಕಾಂಕ್ಷಿಗಳು ಭಾರತ ಸರ್ಕಾರದ ಎಂ.ಎಸ್.ಟಿ.ಸಿ ಪೆÇೀರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿ ಶುಲ್ಕ ಹಾಗೂ ಇ.ಎಂ.ಡಿ ಮೊತ್ತ ಪಾವತಿಸಿ ಹರಾಜಿನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇ-ಹರಾಜಿನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಿ. ಮಾದೇಶ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್