ಕೊಪ್ಪಳ ನಗರಸಭೆ : ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ
ಕೊಪ್ಪಳ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾ0ಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತ
ಕೊಪ್ಪಳ ನಗರಸಭೆ : ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ


ಕೊಪ್ಪಳ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾ0ಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ.

ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾ0ಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ. ಈ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ , ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬ0ಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಕರ್ನಾಟಕ-1 ಕೇಂದ್ರಗಳಲ್ಲಿ ಸಹ ನಾಗರೀಕರು ತಂತ್ರಾ0ಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9019788143, 9902061158, 7676701684, 8660686901, 9902599883 ವೆಬ್‌ಸೈಟ್ ವಿಳಾಸ www.eaasti.karnataka.gov.in ಅಥವಾ ನಗರಸಭೆಯ ಕಂದಾಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ನಗರಸಭೆ ಕಾರ್ಯಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande