ರಾಯಚೂರು : ಭಾನುವಾರ ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ
ರಾಯಚೂರು, 26 ಡಿಸೆಂಬರ್ (ಹಿ.ಸ.) ಆ್ಯಂಕರ್ : ರಾಯಚೂರು ಗಿಲ್ಡ್, ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕ
ರಾಯಚೂರು : ಭಾನುವಾರ ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ


ರಾಯಚೂರು, 26 ಡಿಸೆಂಬರ್ (ಹಿ.ಸ.)

ಆ್ಯಂಕರ್ : ರಾಯಚೂರು ಗಿಲ್ಡ್, ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಯಚೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ಭಾನುವಾರ 28ರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಉದ್ಘಾಟಿಸುವರು.

ವಿಧಾನ ಪರಿಷತ್ ಶಾಸಕರಾದ ಎ ವಸಂತಕುಮಾರ ಅವರು ಪತ್ರಕರ್ತರ ತುರ್ತು ನಿಧಿಗೆ ಚಾಲನೆ ನೀಡಲಿದ್ದಾರೆ.

ರಾಯಚೂರು ಲೋಕ ಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ರಾಯಚೂರು ಗಿಲ್ಡ್ ವೆಬ್‍ಸೈಟ್ ಲೋಕಾರ್ಪಣೆ ಮಾಡುವರು. ರಾಯಚೂರು ರಿಪೆÇೀರ್ಟರ್ಸ್ ಗಿಲ್ಡ್ ಅಧ್ಯಕ್ಷರಾದ ವಿಜಯ್ ಜಾಗಟಗಲ್ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಹಾಗೂ ರಾಯಚೂರು ನಗರ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ ಅವರು ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಣೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಜಯವಾಣಿ ಪತ್ರಿಕೆಯ ಗಂಗಾವತಿ ಸ್ಥಾನಿಕ ಸಂಪಾದಕರಾದ ಜಗನ್ನಾಥ ಆರ್.ದೇಸಾಯಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಪುಟ್ಟಮಾದಯ್ಯ ಎಂ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಡಾ.ಜಿ.ಸುರೇಶ, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷರಾದ ಪಿ.ಚನ್ನಬಸವ ಬಾಗಲವಾಡ ಅವರು ಸೇರಿದಂತೆ ಇತರರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಪ್ರಜಾಪ್ರಸಿದ್ದ ದಿನಪತ್ರಿಕೆಯ ಹಿರಿಯ ಉಪ ಸಂಪಾದಕರಾದ ರಘುನಾಥರೆಡ್ಡಿ ಮನ್ಸಲಾಪೂರು ಅವರಿಗೆ ರಾಯಚೂರು ಗಿಲ್ಡ್‍ನ ಪ್ರತಿಷ್ಠಿತ ಜೀವನಮಾನ ಸಾಧನೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಲಬುರಗಿ ಪೀಠದ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬಿ.ವೆಂಕಟಸಿಂಗ್ ಅವರಿಗೆ ವಿಶೇಷ ಸನ್ಮಾನ ಮಾಡಲಾಗುತ್ತದೆ.

ಪ್ರಜಾವಾಣಿ ದಿನಪತ್ರಿಕೆಯ ರಾಯಚೂರು ಜಿಲ್ಲಾ ವರದಿಗಾರರಾದ ಚಂದ್ರಕಾಂತ್ ಮಸಾನಿ ಅವರಿಗೆ ದಿ.ದಿದ್ದಿ ಕಿಶನ್‍ರಾವ್ ಸ್ಮರಣಾರ್ಥ ಹಾಗೂ ದಿ.ಹನುಮಂತ್ರಾಯ ಗೌಡ ಗೌರವಾರ್ಥ ಗ್ರಾಮೀಣ/ನಗರ ಅತ್ಯುತ್ತಮ ವರದಿಗಾರಿಕೆ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪವರ್ ಟಿವಿ ಛಾಯಾಗ್ರಾಹಕರರಾದ ಅಬ್ದುಲ್ ಖಾದರ್ ಅವರಿಗೆ ದಿ.ರಘುನಾಥ್ ಸಿಂಗ್ ಬೊಮ್ಮನಾಳ ಸ್ಮರಣಾರ್ಥ ಹಾಗೂ ಪ್ರಕಾಶ್ ಮಸ್ಕಿ ಪ್ರಾಯೋಜಿತ ಅತ್ಯುತ್ತಮ ಛಾಯಾಗ್ರಾಹಕ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಮೋಘ ಕೇಬಲ್ ವರದಿಗಾರರಾದ ಶ್ರೀನಿವಾಸ ಕೆ. ಅವರಿಗೆ ಕೆ.ಅಡಿವೆಪ್ಪ ಸ್ಮಾರಕ, ಕೆ.ಸತ್ಯನಾರಾಯಣ ಪ್ರಾಯೋಜಿತ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಜಾಪ್ರಸಿದ್ದ ದಿನಪತ್ರಿಕೆಯ ವರದಿಗಾರರಾದ ಬಿ. ರಾಜು ಅವರಿಗೆ ದಿ.ಎನ್.ಕೆ.ಕುಲಕರ್ಣಿ ಸ್ಮರಣಾರ್ಥ ರಾಯಚೂರು ವಾಣಿ ಮತ್ತು ಕೊಪ್ಪಳ ಜಿಲ್ಲಾ ಅತ್ಯುತ್ತಮ ವರದಿಗಾರ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ರಾಯಚೂರು ರಿಪೆÇೀರ್ಟರ್ಸ್ ಗಿಲ್ಡ್‍ನ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ ಹೂಗಾರ ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಖಾನ್‍ಸಾಬ್ ಮೋಮಿನ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande