ಡಿಸೆಂಬರ್ 28, 29 ಮತ್ತು 30 ರಂದು ಯಾದಗಿರಿಯಲ್ಲಿ ವೈಜ್ಞಾನಿಕ ಸಮ್ಮೇಳನ
ಬಳ್ಳಾರಿ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ಡಿಸೆಂಬರ್ 28, 29 ಮತ್ತು 30 ರಂದು ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಅವರ ಸರ್ವಾಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಯಾದಗಿರಿಯಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಬಳ್ಳಾರಿ ಜಿ
ಡಿಸೆಂಬರ್ 28, 29 ಮತ್ತು 30 ರಂದು ಯಾದಗಿರಿಯಲ್ಲಿ ವೈಜ್ಞಾನಿಕ ಸಮ್ಮೇಳನ


ಬಳ್ಳಾರಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ಡಿಸೆಂಬರ್ 28, 29 ಮತ್ತು 30 ರಂದು ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಅವರ ಸರ್ವಾಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಯಾದಗಿರಿಯಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷ ಆರ್.ಹೆಚ್.ಯಂ. ಚನ್ನಬಸವಸ್ವಾಮಿ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜಿಲ್ಲಾಡಳಿತ ಯಾದಗಿರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಇಸ್ರೋ, ಜವಾಹರಲಾಲ್ ನೆಹರು ತಾರಾಲಯ, ಭಾರತ ವಾಯುಪಡೆ, ಕರ್ನಾಟಕ ವಿಶ್ವೇಶ್ವರಯ್ಯ ಕೈಗಾರಿಕ ಹಾಗೂ ತಾಂತ್ರಿಕ ಮ್ಯೂಸಿಯಂ, ಮೊಬೈಲ್ ಪ್ಲಾನಿಟೋರಿಯಂ, ಕೆ-ಸ್ಟೆಪ್ಸ್, ನ್ಯಾಷನಲ್ ಏರೋನಾಟಿಕ್ಸ್ ಲ್ಯಾಬೋರೋಟರಿ, ಡಿ.ಆರ್.ಡಿ.ಓ, ಮಾನವ ಬಂಧುತ್ವ ವೇದಿಕೆ ಹಾಗೂ ಯಾದಗಿರಿ ಜಿಲ್ಲೆಯ

ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸಮ್ಮೇಳನ ಏರ್ಪಟ್ಟಿದೆ.

ಈ ಸಮ್ಮೇಳನದಲ್ಲಿ ಅನೇಕ ಸಾಧಕರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಿಂದ ರಾಜ್ಯ ಮಟ್ಟದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಆರ್.ಹೆಚ್.ಯಂ. ಚನ್ನಬಸವಸ್ವಾಮಿ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ವಿಶಿಷ್ಟ ಸೇವಾ ಪ್ರಶಸ್ತಿ, ಸಿ.ಯಂ. ಗಂಗಾಧರಯ್ಯ ಅವರಿಗೆ ಹೆಚ್.ಎನ್. ಪ್ರಶಸ್ತಿ ಮತ್ತು ಶಿಕ್ಷಕಿ ಈರಮ್ಮ ಅವರಿಗೆ ಚೈತನ್ಯ ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande