
ಕೊಪ್ಪಳ, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ಡಿಸೆಂಬರ್ 29 ರಂದು ಸಂಜೆ 5.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ವಹಿಸಿಕೊಳ್ಳುವರು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್